ವೀರಗಂಟಿ ಶರಣ ಮಡಿವಾಳ ಮಾಚಿದೇವರ ವಚನ “ಉಟ್ಟ ಸೀರೆಯ ಹರಿದು ಹೋದಾತ” ವಿಶ್ಲೇಷಣೆ / ಡಾ. ವಿಜಯಕುಮಾರ ಕಮ್ಮಾರ, ತುಮಕೂರು.
ಉಟ್ಟ ಸೀರೆಯ ಹರಿದು ಹೋದಾತ ನೀನಲಾ ಬಸವಣ್ಣ.ಮೆಟ್ಟಿದ ಕೆರಹ ಕಳೆದು ಹೋದಾತ ನೀನಲಾ ಬಸವಣ್ಣ.ಕಟ್ಟಿದ ಮುಡಿಯ ಬಿಟ್ಟು ಹೋದಾತ ನೀನಲಾ ಬಸವಣ್ಣ.ಸೀಮೆ ಸಂಬಂಧವ ತಪ್ಪಿಸಿ ಹೋದಾತ ನೀನಲಾ ಬಸವಣ್ಣ.ಲಿಂಗಕ್ಕೆ ಮಾಡಿದುದ ಸೋಂಕದೇ ಹೋದೆಯಲ್ಲಾ ಬಸವಣ್ಣ.ಜಂಗಮಕ್ಕೆ ಮಾಡಿದ ಮಾಟವ ಕೈಯಲ್ಲಿ ಹಿಡಿದುಕೊಂಡುಹೋದೆಯಲ್ಲಾ ಬಸವಣ್ಣ.ಬೆಳಗನುಟ್ಟು ಬಯಲಾಗಿ ಹೋದೆಯಲ್ಲಾ ಬಸವಣ್ಣ.ಆ ಬಸವಣ್ಣಂಗೆ ಶರಣೆಂಬ ಪಥವನೆ ತೋರು ಕಂಡಾಕಲಿದೇವರದೇವಾ.(ಸಮಗ್ರ ವಚನ ಸಂಪುಟ: ಒಂದು-2016/ಪುಟ ಸಂಖ್ಯೆ-1416/ವಚನ ಸಂಖ್ಯೆ-516) ಕಲ್ಯಾಣ ಕ್ರಾಂತಿಯ ಸಮಯದಲ್ಲಿ ಶರಣರ ಕಗ್ಗೊಲೆಯಾದ ವಿಷಮ ಪರಿಸ್ಥಿತಿಯಲ್ಲಿ ಮಡಿವಾಳ ಮಾಚಿದೇವರು ಅತ್ಯಂತ ಸಾಹಸದಿಂದ ಶರಣ ಧರ್ಮ ಸಂರಕ್ಷಣೆ ಮತ್ತು ವಚನ ಸಾಹಿತ್ಯದ ರಕ್ಷಣೆಯ ದಂಡ…