ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಪೋಸ್ಟರ್ ಬಿಡುಗಡೆ
ಮೈಸೂರು : ಬಸವಣ್ಣನವರು ಜನಸಾಮಾನ್ಯರ ಧ್ವನಿಯಾದುದರಿಂದ ವಿಶ್ವಗುರುವಾದರು ಎಂದು ನಿವೃತ ಶಾಲಾ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಶಿವಮಾದಪ್ಪ ಹೇಳಿದರು. ಶರಣು ವಿಶ್ವವಚನ ಫೌಂಡೇಷನ್ ವತಿಯಿಂದ ಮೈಸೂರಿನ ಬೋಗಾದಿಯ ಶಾರದಾನಗರ ರೈಲ್ವೆ ಬಡಾವಣೆಯ ಶರಣು ಕುಟೀರದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು ಬಸವಣ್ಣನವರ ತತ್ವವನ್ನು ಪಾಲನೆ ಮಾಡಿದ ಸಿದ್ಧಗಂಗೆಯ ಶ್ರೀ ಶಿವಕುಮಾರಸ್ವಾಮಿಗಳು ,ಬಸವಣ್ಣನವರ ನಾಟಕವನ್ನು ಒಂದು ಸಾವಿರಕ್ಕೂ ಹೆಚ್ಚು ಗ್ರಾಮಾಂತರ ಪ್ರದೇಶಗಳಲ್ಲಿ ಪ್ರದರ್ಶನ ಮಾಡಿಸಿ ಜೊತೆಗೆ ಮಠದಲ್ಲಿ ಜಾತ್ಯಾತೀತವಾಗಿ ವಿದ್ಯಾರ್ಥಿಗಳಿಗೆ ಆಶ್ರಯ ನೀಡಿ ೧೧೧ ವರ್ಷಗಳ ಸಾರ್ಥಕ…