ಭಾವೈಕ್ಯತೆಯ ಮತ್ತು ಜೀವಪ್ರೀತಿಯ ಸೆಲೆ ಸಿದ್ಧಗಂಗೆ | ಡಾ. ವಿಜಯಕುಮಾರ ಕಮ್ಮಾರ,ತುಮಕೂರು.
ಹರನ ಕರುಣೋದಯದ ತೆರದಲಿ ಬೆಳಗು ತೆರೆಯುವ ಹೊತ್ತಿಗೆವೇದಘೋಷದ ದಿವ್ಯಲಹರಿಯು ಮನವು ತೊಳೆಯಲು ಮೆಲ್ಲಗೆಬರುವ ಶ್ರೀಗುರು ಪಾದುಕೆಯ ದನಿ ಅನುರಣಿತವಾಗಲು ಮೌನಕೆಸಿದ್ಧಗಂಗೆಯ ನೆಲವು ಜಲವೂ ನಮಿಸಿ ನಿಲುವುದು ಸುಮ್ಮಗೆ || 01 || ಬೆಟ್ಟ ಬಂಡೆಯ ನಡುವೆ ಗಿಡ ಮರ ಹೂವನೆತ್ತಿರೆ ಪೂಜೆಗೆದೇಗುಲದ ಪೂಜಾರತಿಯ ಗಂಟೆಯ ಮೊಳಗು ಮುಟ್ಟಲು ಬಾನಿಗೆಧೂಪಗಂಧವು ಮಂದಮಂದಾನಿಲ ಜೊತೆಯೊಳು ಮನಸಿಗೆಸಂಭ್ರಮವನುಕ್ಕಿಸೆ ಬೆಳಗು ಇಳಿವುದು ಸಿದ್ಧಗಂಗೆಯ ಕ್ಷೇತ್ರಕೆ || 02 || ಇಲ್ಲಿ ಇಲ್ಲ ಪವಾಡದದ್ಭುತ ಅಥವ ಉತ್ಸವದಬ್ಬರಮುಡಿಯನೆತ್ತಿದೆ ಸರಳ ಸಾಧಾರಣ ನದುಕಿನ ಗೋಪುರದರ ಮೇಲಿದೆ ತ್ಯಾಗಧ್ವಜ ಕೈಬೀಸಿ ಕರೆವುದು ಪಥಿಕರಪರಮ ನಿರಪೇಕ್ಷೆಯಲ್ಲಿ ದಿನವೂ ಸೇವೆಗಾಗಿದೆ…